ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಹಿತದೃಷ್ಟಿಯಿಂದ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.7.ಜೂನ್ 11 ರಿಂದ ಜೂನ್ 20 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ 7 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಅವರು ಘೊಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿರುತ್ತಾರೆ.

ಈ ನಿಷೇಧಿತ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ಇನ್ನಾವುದೇ ವಸ್ತುಗಳನ್ನು ಹಂಚುವುದು/ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ.ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ನಿಷೇಧಿಸಲಾಗಿದೆ.

 

ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು/ಮಾಹಿತಿಯನ್ನು ರವಾನಿಸುವ ಅಥವಾ ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ನಿಷೇಧಿಸಲಾಗಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಕೇಂದ್ರಗಳು ಹಾಗೂ ಕೇಂದ್ರ ಮುಖ್ಯ ಅಧೀಕ್ಷಕರ ವಿವರ ಇಂತಿವೆ: ಗೋವಿಂದದಾಸ ಪದವಿ ಪೂರ್ವ ಕಾಲೇಜು, ಸುರತ್ಕಲ್ ದೂರವಾಣಿ ಸಂಖ್ಯೆ: 0824-2407397 ಅಧಿಕ್ಷಕರು ಲಕ್ಷ್ಮಿ ಪಿಒ ಮೊಬೈಲ್ ಸಂಖ್ಯೆ: 8105654397, ಸರಕಾರಿ ಪದವಿ ಪೂರ್ವ ಕಾಲೇಜು ಬಲ್ಮಠ, ದೂರವಾಣಿ ಸಂಖ್ಯೆ: 0824-2443557, ಅಧೀಕ್ಷಕರು ಮಾರ್ಯೆಟ್ ಮಸ್ಕರೇನಸ್, ಮೊಬೈಲ್ ಸಂಖ್ಯೆ: 9480156647, ಬೆಸೆಂಟ್ ಪದವಿ ಪೂರ್ವ ಕಾಲೇಜು ದೂರವಾಣಿ ಸಂಖ್ಯೆ: 0824-2495650, ಅಧೀಕ್ಷಕರು ನಾಯಕ್ ರೂಪ್‍ಸಿಂಗ್, ಸರಕಾರಿ ಪದವಿ ಪೂರ್ವ ಕಾಲೇಜು ಪುತ್ತೂರು, ದೂರವಾಣಿ ಸಂಖ್ಯೆ: 08251-230686,

ಅಧೀಕ್ಷಕರು ಎನ್ ಕೆ ಸುರೇಶ್ ಮೊಬೈಲ್ ಸಂಖ್ಯೆ: 8453648846, ವೆಂಕಟ್ರಮಣ ಸ್ವಾಮಿ ಪದವಿ ಪೂರ್ವ ಕಾಲೇಜು ಬಂಟ್ವಾಳ ದೂರವಾಣಿ ಸಂಖ್ಯೆ: 08255-232413, ಅಧೀಕ್ಷಕರು ಶಶಿಕಲ ಕೆ ಮೊಬೈಲ್ ಸಂಖ್ಯೆ: 9480231268, ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ದೂರವಾಣಿ ಸಂಖ್ಯೆ: 08256-232109, ಅಧೀಕ್ಷಕರು ಸುಕುಮಾರ್ ಮೊಬೈಲ್ ಸಂಖ್ಯೆ: 9449467723, ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ದೂರವಾಣಿ ಸಂಖ್ಯೆ: 08257-230363, ಅಧೀಕ್ಷಕರು ಮೋಹನ ಗೌಡ ಜಿ.ಕೆ ಮೊಬೈಲ್ ಸಂಖ್ಯೆ: 8618582653.ಈ ಆದೇಶವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಮಾತ್ರ ಜ್ಯಾರಿಯಲ್ಲಿರುತ್ತದೆ.

error: Content is protected !!

Join the Group

Join WhatsApp Group