ದ.ಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ➤ಸಮಾಜ ಸೇವಾ ಕಾರ್ಯಕರ್ತೆಯ 2 ಹುದ್ದೆಗೆಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11.ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ಸಮಗ್ರ ಸೌಲಭ್ಯ ನೀಡುವರೇ ಜಿಲ್ಲಾ ಲೇಡಿಗೋಷನ್ ಆಸ್ಪತ್ರೆಯ ಗೆಳತಿ ವಿಶೇಷ ಚಿಕಿತ್ಸಾ ಘಟಕದಲ್ಲಿ ತೆರವಾಗಿರುವ ಸಮಾಜ ಸೇವಾ ಕಾರ್ಯಕರ್ತೆಯ 2 ಹುದ್ದೆಗೆ ಅರ್ಜಿಆಹ್ವಾನಿಸಲಾಗಿದೆ.

ಬಿ.ಎಸ್.ಡಬ್ಲ್ಯೂ/ಬಿ.ಎ (ಸೈಕಾಲಜಿ) ಹಾಗೂ 1 ವರ್ಷದ ಕಂಪ್ಯೂಟರ್ ಅನುಭವವುಳ್ಳ 22 ರಿಂದ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾಸಿಕ ಗೌರವಧನ ರೂ.10,000/-ಆಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 17 .ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಕಟ್ಟಡ, ಮಂಗಳೂರು ಈ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆ: 0824-2451254 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Also Read  ಕಡಬ: ಡಿ. 04ರಂದು ಜಿಲ್ಲಾ ಮಟ್ಟದ ಯುವಜನೋತ್ಸವ

error: Content is protected !!
Scroll to Top