ಸುಬ್ರಹ್ಮಣ್ಯ: ಬಸ್ಸಿಗೆ ಕಾಯುತ್ತಿದ್ದ ವ್ಯಕ್ತಿಯ ಮೇಲೆ ಬಿದ್ದ ಮರದ ಕೊಂಬೆ ➤ ಬಿಳಿನೆಲೆ ನಿವಾಸಿಗೆ ಗಾಯ



(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.11. ಅಶ್ವತ್ಥ ಮರದ ಕೊಂಬೆಯೊಂದು ತುಂಡಾಗಿ ಬಿದ್ದ ಪರಿಣಾಮ ಬಸ್ಸಿಗೆ ಕಾಯುತ್ತಿದ್ದ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಮಂಗಳವಾರ ಸಂಜೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.







ಘಟನೆಯಲ್ಲಿ ಎಂದಿನಂತೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳಲೆಂದು ಬಸ್ಸಿಗಾಗಿ ಕಾಯುತ್ತಿದ್ದ ಬಿಳಿನೆಲೆ ನಿವಾಸಿ ಹರೀಶ್ಚಂದ್ರ ಎಂಬವರ ಹಣೆ, ಭುಜಕ್ಕೆ ಗಾಯಗಳಾಗಿದ್ದು, ಸುಬ್ರಹ್ಮಣ್ಯದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಘಟನೆಯ ವೇಳೆ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಡಬ – ಸುಬ್ರಹ್ಮಣ್ಯ ಮಧ್ಯೆ ಸರ್ವಿಸ್ ನಡೆಸುವ ಬೊಲೆರೋ ವಾಹನಕ್ಕೂ ಹಾನಿಯಾಗಿದೆ ಎಂದು ತಿಳಿದುಬಂದಿದೆ.






error: Content is protected !!
Scroll to Top