ಸ್ವಚ್ಛ ಮೇವ ಜಯತೆ ಜಾನಂದೋಲನ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ (ಗ್ರಾ), ಮಂಗಳೂರು ತಾಲೂಕು ಪಂಚಾಯತ್ ಸಹಯೋಗದಲ್ಲಿ ಇಂದು ಮಂಗಳೂರು ತಾಲೂಕಿನ ಪಾವೂರು ಗ್ರಾಮ ಪಂಚಾಯತಿಯಲ್ಲಿ ಜಿಲ್ಲಾ ಹಂತದ `ಸ್ವಚ್ಛಮೇವ ಜಯತೆ’ ಜನಾಂದೋಲನಕ್ಕೆ ಚಾಲನೆಯನ್ನು ನೀಡಲಾಯಿತು.


ಸ್ವಚ್ಛತಾ ರಥಕ್ಕೆ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು ಚಾಲನೆಯನ್ನು ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಕಸ್ತೂರಿ ಪಂಜ ಇವರು ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಶಂಕುಸ್ಥಾಪನೆ ಹಾಗೂ ಸ್ವಚ್ಛಮೇವ ಜಯತೆ ಜಿಲ್ಲಾ ಹಂತದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಇದರ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಜನಾರ್ಧನ ಗೌಡ ಅವರು ಗಿಡನೆಡುವಿಕೆ ನೆರವೇರಿಸಿದರು. ಪಾವೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಾಮನ ಸಫಲಿಗ ಅವರು ಸ್ವಾಗತಿಸಿದರು.

Also Read  ಕಡಬ ಬ್ಲಾಕ್ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ➤ ಬ್ಲಾಕ್ ಅಧ್ಯಕ್ಷರಾಗಿ ಸುಧೀರ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅಭಿಲಾಷ್ ಪಿ.ಕೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸೆಲ್ವಮಣಿ ಆರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಘು.ಎ.ಇ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಪಾವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ. ಫಿರೋಝ್ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಜನಾಂದೋಲನ ಕಾರ್ಯಕ್ರಮವು ಜೂ.11 ರಿಂದ ಜುಲೈ 10 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಐದು ತಾಲೂಕುಗಳಲ್ಲಿ ಒಂದು ತಿಂಗಳ ಕಾಲ ನಡೆಯಲಿದೆ.

Also Read  ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರಿಂದ ನಿರ್ಮಾಲಾ ಸೀತಾರಾಮನ್ ಅವರ ಭೇಟಿ

error: Content is protected !!
Scroll to Top