ದ.ಕ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.13.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಜೂನ್ 15 ರಂದು ನಡೆಸಲು ಕಾರ್ಯಕ್ರಮ ಹಮ್ಮಿಕೊಂಡಿದೆ.

ಪುತ್ತೂರು ತಾಲೂಕಿನ ಪಾಣಾಜೆ ಮತ್ತು ಜೂನ್ 18 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿ,ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಮತ್ತು ಜೂನ್ 19 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Also Read  ನಿಮ್ಮ ಬೊಜ್ಜು ದೇಹಕ್ಕೆ ಕಾರಣವಾಗುತ್ತವೆ ಈ ಆಹಾರಗಳು!

error: Content is protected !!
Scroll to Top