ಕೊಣಾಜೆ: ಖಾಸಗಿ ಬಸ್ – ಬೈಕ್ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು



(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.13. ಖಾಸಗಿ ಬಸ್ ಹಾಗೂ ಸುಝುಕಿ ಜಿಕ್ಸರ್‌ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕೋಣಾಜೆ ಸಮೀಪದ ಅಸೈಗೋಳಿ ಎಂಬಲ್ಲಿ ಗುರುವಾರದಂದು ಸಂಭವಿಸಿದೆ.







ಮೃತ ಸವಾರನನ್ನು ಪಜೀರ್ ನಿವಾಸಿ ಹರ್ಷಿತ್ ಎಂದು ಗುರುತಿಸಲಾಗಿದೆ. ಸ್ಟೇಟ್ ಬ್ಯಾಂಕ್ ನಿಂದ ಕೊಣಾಜೆ ಮಾರ್ಗವಾಗಿ ವಿಟ್ಲಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಹರ್ಷಿತ್ ಚಲಾಯಿಸುತ್ತಿದ್ದ ಬೈಕ್ ಅಸೈಗೋಳಿ ಸಮೀಪದ ತಿಬ್ಲೆಪದವು ತಿರುವಿನಲ್ಲಿ ಪರಸ್ಪರ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಕೊಣಾಜೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top