ಹಿಂದುಳಿದ ವರ್ಗಗಳ ಹಾಸ್ಟೆಲ್‍ಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ಸಾಮಾನ್ಯ ಮತ್ತು ಮಾದರಿ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2019-20ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮಿತಿ – ಪ್ರವರ್ಗ-1, ಎಸ್.ಸಿ. & ಎಸ್.ಟಿ ರೂ. 2.50 ಲಕ್ಷ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. 1.00 ಲಕ್ಷ. ವೆಬ್‍ಸೈಟ್ www.backwardclasses.kar.nic.in ನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬೇಕು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 12 ಆಗಿದೆ. ತಾಲೂಕುವಾರು ವಿದ್ಯಾರ್ಥಿನಿಲಯಗಳಲ್ಲಿ ಖಾಲಿಯಿರುವ ಸ್ಥಾನಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ www.backwardclasses.kar.nic.inಅನ್ನು ಸಂಪರ್ಕಿಸಬೇಕು.

Also Read  ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ➤ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿè bcwhosteladmission@gmail.com ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬೇಕು ಎಂದು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top