(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.ಕರ್ನಾಟಕ ಭೋವಿ ಅಭಿವೃದ್ದಿ ನಿಗಮವು, 2019-20ನೇ ಸಾಲಿಗೆ ಪರಿಶಿಷ್ಟ ಜಾತಿಯ ಭೋವಿ ಜನಾಂಗದ ಜನರ ಆರ್ಥಿಕ ಅಭಿವೃದ್ದಿಗಾಗಿ ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಮೈಕ್ರೋಕ್ರೆಡಿಟ್ ಯೋಜನೆ, ಮತ್ತು ಸಮಗ್ರ ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಅಹ್ವಾನಿಸಿದೆ. ಅರ್ಜಿ ಸ್ವೀಕರಿಸಲು ಕೊನೆಯ ದಿನ ಜುಲೈ 31 ಆಗಿರುತ್ತದೆ.
ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು: ಅರ್ಜಿದಾರರು ಪರಿಶಿಷ್ಟ ಜಾತಿಯ ಭೋವಿ ಜನಾಂಗಕ್ಕೆ ಸೇರಿದವರಾಗಿರಬೇಕು ಹಾಗೂ ಕಳೆದ ಕನಿಷ್ಟ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರು 18 ವರ್ಷದಿಂದ 60 ವರ್ಷದೊಳಗಿನ ವಯೋಮಾನದವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ ರೂ.1,50,000/- ಹಾಗೂ ನಗರ ಪ್ರದೇಶವಾದಲ್ಲಿ ರೂ.2,00,000/- ಮಿತಿಯೊಳಗಿರಬೇಕು. ಅರ್ಜಿದಾರರ ಕುಟಂಬದ ಯಾವುದೇ ಸದಸ್ಯರು ಸರ್ಕಾರಿ / ಅರೆ ಸರ್ಕಾರ ಸಂಸ್ಧೆಯಲ್ಲಿ ನೌಕರಿಯಲ್ಲಿರಬಾರದು. ಅರ್ಜಿದಾರರು ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು.
ಜಿಲ್ಲೆಯಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿ ಈಗಾಗಲೇ ನೊಂದಣಿ ಮಾಡಿಕೊಂಡಿರುವ ಭೋವಿ ಜನಾಂಗದ ಅಂಗವಿಕಲ ಫಲಾನುಭವಿಗಳ ಲಭ್ಯವಿರುವ ಪಟ್ಟಿಯಿಂದ ಅಂಗವಿಕಲರನ್ನು ನೇರವಾಗಿ ಸಂದರ್ಶನ ಮಾಡಿ ಶೇ.5ರಷ್ಟು ಮೀಸಲಾತಿಯನ್ನು ನೀಡಿ ಸೌಲಭ್ಯ ಕಲ್ಪಿಸಲಾಗುವುದು. ವಾಹನಗಳಿಗೆ ಸೌಲಭ್ಯ ಪಡೆಯಲು ಫಲಾಪೇಕ್ಷಿಗಳು ಡ್ರೈವಿಂಗ್ ಲೈಸೆನ್ಸ್‍ನೊಂದಿಗೆ ಬ್ಯಾಡ್ಜ್ ಅನ್ನೂ ಹೊಂದಿರಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾಪೇಕ್ಷಿಯು ಕನಿಷ್ಟ 1-20 ಎಕರೆಯಿಂದ ಗರಿಷ್ಟ 5 ಎಕರೆ ಜಮೀನು ಹೊಂದಿದ ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು.
ಪರಿಶಿಷ್ಟ ಜಾತಿಯ ಭೋವಿ ಜನಾಂಗದದ ಫಲಾಪೇಕ್ಷಿಗಳು ಕರ್ನಾಟಕ ಭೋವಿ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಧಾಪಕರ ಕಚೇರಿಯಲ್ಲಿ ನಿಗದಿಪಡಿಸಿದ ಉಚಿತ ಅರ್ಜಿಗಳನ್ನು ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಕಚೇರಿಗೆ ಜುಲೈ 31 ರೊಳಗೆ ಸಲ್ಲಿಸಬೇಕು. ಅಂತಿಮ ದಿನಾಂಕದ ನಂತರ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಡಾ:ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿ.ಹೆಚ್.ಎಸ್.ರಸ್ತೆ, ಜನತಾ ಬಜಾರ್ ಕಟ್ಟಡ, 2ನೇ ಮಹಡಿ, ಮಂಗಳೂರು ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ: 0824-2420114.