ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2019-20ನೇ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸುವವರು ನಿಗದಿತ ಅರ್ಜಿ ನಮೂನೆಗಳನ್ನು ಆಯಾ ಜಿಲ್ಲೆಯ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಪಡೆಯುವುದು.

ಅರ್ಜಿಗಳನ್ನು ಜುಲೈ 12 ರೊಳಗೆ ಪಡೆಯಬೇಕು. . ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜುಲೈ 22 ರೊಳಗೆ ಸಲ್ಲಿಸಬೇಕು .ಸಾಮಾನ್ಯ ಅರ್ಹತೆಗಳು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು . ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಗಂಗಾ ಕಲ್ಯಾಣ ಯೋಜನೆಯಲ್ಲಿ ನೀರಾವರಿ ಸೌಲಭ್ಯ ಪಡೆಯಲು ಅರ್ಜಿದಾರರರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು ಹಾಗೂ ಒಂದೇಕಡೆ ಹೊಂದಿಕೊಂಡಿರುವಂತೆ ಕನಿಷ್ಠ 2ಎಕರೆ ಹಾಗೂಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು. (ಉತ್ತರಕನ್ನಡ, ದಕ್ಷಿಣಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು).

Also Read  ಡಿಜಿಟಲ್ ಮಾರ್ಕೆಟಿಂಗ್ ವಂಚನೆ        ➤18.43 ಲಕ್ಷ ರೂ. ಹಣ ಕಳೆದುಕೊಂಡ ವ್ಯಕ್ತಿ

ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ರಾಜ್ಯ ಸರ್ಕಾರದ ಯೋಜನೆಗಳ ವಿವರ: ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು, ಸ್ವಯಂಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಯಂಉದ್ಯೋಗ ಸಾಲ, ಅರಿವು-ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿಯೋಜನೆ, ಮಹಿಳೆಯರಿಗೆ ಮೈಕ್ರೋ ಕ್ರೆಡಿಟ್ ಸಾಲ ಯೋಜನೆ, ಕಮ್ಮಾರಿಕೆ, ಅಕ್ಕಸಾಲಿ ಮತ್ತು ಬಡಗಿ ಉದ್ಯಮಿಗಳಿಗೆ ತರಬೇತಿ ಮತ್ತು ಸಾಲ ಯೋಜನೆ, ರಾಜ್ಯ ಸರ್ಕಾರದ ಯೋಜನೆಗಳಿಗೆ ಕುಟುಂಬದ ವಾರ್ಷಿಕ ವರಮಾನವು ಗ್ರಾಮಾಂತರ ಪ್ರದೇಶದವರಿಗೆ ರೂ.40,000/- ಗಳಿಗಿಂತ ಹಾಗೂ ಪಟ್ಟಣ ಪ್ರದೇಶದವರಿಗೆ ರೂ.55,000/- ಗಳಿಗಿಂತ ಕಡಿಮೆ ಇರಬೇಕು. (ಅರಿವು ಯೋಜನೆಗೆ ವಾರ್ಷಿಕ ವರಮಾನವು ರೂ.3.50ಲಕ್ಷಗಳ ಮಿತಿ ಇರಬೇಕು). ನಿಗಮದ ಜಿಲ್ಲಾ ವ್ಯವಾಸ್ಥಾಪಕರ ಕಛೇರಿ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್, ಮಂಗಳೂರು ಅಥವಾ ವೆಬ್‍ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಞvಛಿಜಛಿಟ ರಲ್ಲಿ ಪಡೆಯಬಹುದು ಎಂದು ಜಿಲ್ಲಾ ವ್ಯವಸ್ಥಾಪಕರ ಪ್ರಕಟನೆ ತಿಳಿಸಿದೆ.

Also Read  ವಿನ್ಯಾಸ ನಕ್ಷೆ ಅನುಮೋದನೆ: ಖಾಸಗಿ ವಾಸ್ತು ಶಿಲ್ಪಿಗಳಿಂದ ಅರ್ಜಿ ಆಹ್ವಾನ

error: Content is protected !!
Scroll to Top