ಕೈಗಾರಿಕಾ ಘಟಕಗಳ ಸ್ಥಾಪನೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.2019-20ನೇ ಸಾಲಿಗೆ ಸಿ.ಎಂ.ಇ.ಜಿ.ಪಿ ಯೋಜನೆಯಡಿ ಗ್ರಾಮೀಣ ಭಾಗದ ವಯೋಮಿತಿ 18 ರಿಂದ 45 ವರ್ಷದೊಳಗಿನ ನಿರುದ್ಯೋಗಿಗಳಿಗೆ ಕೈಗಾರಿಕೆ ಘಟಕಗಳನ್ನು ಹೊಸದಾಗಿ ಪ್ರಾರಂಭಿಸಲು ಅರ್ಜಿಗಳನ್ನು ಆಹ್ವಾನಿಸಿದ್ದು ಒಟ್ಟು ಯೋಜನಾ ಮೊತ್ತ 10 ಲಕ್ಷದವರೆಗೆ ಸಾಲ ಪಡೆಯಲು ಅರ್ಹರಿದ್ದು (www.cmegp.kar.nic.in) ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಸಲ್ಲಿಸಬಹುದಾಗಿದೆ.

ಆನ್‍ಲೈನಲ್ಲಿ ಅರ್ಜಿಗಳನ್ನು ಸಲ್ಲಿಸಿ ದ್ವಿ ಪತ್ರಗಳಿಗಳಲ್ಲಿ ಭಾವಚಿತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ಯೋಜನಾ ವರದಿ, ಜನಸಂಖ್ಯಾ ಪ್ರಮಾಣ, ಆಧಾರ್ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಈ ದಾಖಲಾತಿಗಳೊಡನೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಖಾದಿ ಗ್ರಾಮೋದ್ಯೋಗ ಮಂಡಳಿ, ಮಂಗಳೂರು ಮಹಾನಗರ ಪಾಲಿಕೆ 3ನೇ ಮಹಡಿ, ಲಾಲ್‍ಭಾಗ್ ಮಂಗಳೂರು ದೂರವಾಣಿ ಸಂಖ್ಯೆ: 0824-2454800 / 8073522854 / 9886592311 ಸಂಪರ್ಕಿಸಲು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಮಾಣಿ: ಮುಂದುವರಿದ ಸರಣಿ ಕಳ್ಳತನ ➤ ವರ್ತಕರ ಆಕ್ರೋಶ

error: Content is protected !!
Scroll to Top