ಉಚಿತ ಕಾನೂನು ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2019-20 ನೇ ಸಾಲಿನಲ್ಲಿ ಸರಕಾರಿ ವಕೀಲರ ಅಧೀನದಲ್ಲಿ ನಾಲ್ಕು ವರ್ಷಗಳ ಅವಧಿಯ ಉಚಿತ ಕಾನೂನು ತರಬೇತಿಯನ್ನು ನೀಡುವ ಕಾರ್ಯಕ್ರಮದಡಿ, ಕಾನೂನು ತರಬೇತಿ ಪಡೆಯಲಿಚ್ಚಿಸುವ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿತರಾದ ಕಾನೂನು ಪದವೀಧರರಾಗಿದ್ದು, ಕುಟುಂಬದ ವಾರ್ಷಿಕ ಆದಾಯವು ರೂ 2.50 ಲಕ್ಷವನ್ನು ಮೀರಿರಬಾರದು (ವರ್ಗ-1 ರ ಅಭ್ಯರ್ಥಿಗಳಿಗೆ ಆದಾಯ ಮಿತಿ ರೂ 3.50 ಲಕ್ಷ) ನಿಗದಿತ ವಯೋಮಿತಿಯವರಾಗಿದ್ದು, ಅಂತಿಮ ಕಾನೂನು ಪದವಿಯನ್ನು ಪೂರ್ಣಗೊಳಿಸಿ ಎರಡು ವರ್ಷ ಮೀರಿರಬಾರದು. ವರ್ಗ-1 ರ ಅಭ್ಯರ್ಥಿಗಳಿಗೆ ಪ್ರಾಶಸ್ತ್ಯವನ್ನುನೀಡಲಾಗುವುದು. ತರಬೇತಿ ಅವಧಿಯಲ್ಲಿ ಹಾಜರಾತಿಗನುಸಾರವಾಗಿ ಮಾಸಿಕ ರೂ. 4,000 ತರಬೇತಿ ಭತ್ಯೆಯನ್ನು ಪಾವತಿಸಲಾಗುವುದು.

Also Read  ಮರಿಯೊಂದಿಗೆ ಚಿರತೆ ಪ್ರತ್ಯಕ್ಷ      ಗ್ರಾಮಸ್ಥರಿಗೆ ಆತಂಕ              

ಅರ್ಜಿ ನಮೂನೆಯನ್ನು ಜಿಲ್ಲಾ ಅಧಿಕಾರಿಯವರ ಕಚೇರಿ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಆನೆಗುಂಡಿ ರೋಡ್, ಬಿಜೈ-ಕಾಪಿಕಾಡ್, ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿಂದ ಪಡೆದುಕೊಳ್ಳಬಹುದು.
ಅರ್ಜಿಯೊಂದಿಗೆ ವರ್ಗವಣೆ ಪ್ರಮಾಣ ಪತ್ರದ ಪ್ರತಿ, ಪದವಿ/ಕಾನೂನು ಪದವಿಯ ಅಂಕ ಪಟ್ಟಿಗಳು, ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿತರಾಗಿರುವ ಬಗ್ಗೆ ಪ್ರಮಾಣ ಪತ್ರ,ಜಾತಿ ಆದಾಯ ಪ್ರಮಾಣ ಪತ್ರ ಮತ್ತು ಎರಡು ಭಾವಚಿತ್ರ(ಪಾಸ್‍ಪೋರ್ಟ್ ಸೈಜ್) ಗಳನ್ನು ಲಗತ್ತಿಸಬೇಕು ಹಾಗೂ ಅರ್ಜಿಯನ್ನು ಜುಲೈ 18 ಬರೊಳಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಆನೆಗುಂಡಿ ರೋಡ್, ಬಿಜೈ-ಕಾಪಿಕಾಡ್, ಮಂಗಳೂರು ಇಲ್ಲಿಗೆ ಸಲ್ಲಿಸಬೇಕು.

Also Read  ಕಂದಾಯ ಇಲಾಖೆ ನೌಕರರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ

error: Content is protected !!
Scroll to Top