(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.5.ಹಿಂದುಳಿದ ವರ್ಗಗಳಿಗೆ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನಲ್ಲಿ ಕರ್ನಾಟಕ ಪರಿಕ್ಷಾ ಪ್ರಾಧಿಕಾರ/ಸಿ.ಇ.ಟಿ ಮೂಲಕ ಸೀಟು ಪಡೆದು ಡಿಫ್ಲೋಮಾ ಲ್ಯಾಟರಲ್ ಎಂಟ್ರಿ ( ಇಂಜಿನಿಯರಿಂಗ್ ಕೋರ್ಸ್ ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಮಾತ್ರ) ಸೀಮಿತವಾಗಿರುತ್ತದೆ.
ಪಿ.ಜಿ. ಕೋರ್ಸ್‍ಗಳಾದ ಎಂ.ಬಿ.ಎ, ಎಂ.ಎಸಿ.ಎ, ಎಂ.ಟೆಕ್, ಎಂ.ಇ ಕೋರ್ಸ್‍ಗಳಲ್ಲಿ ಸೀಟ್ ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಶುಲ್ಕ ಹೊಂದಾಣಿಕೆ ಮಾಡಲಾಗುತ್ತಿದೆ.ಈ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡಲು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಪಡೆಯಬಹುದು.
ಹಿಂದುಳಿದ ವರ್ಗಗಳ ಪ್ರ-1, ಪ್ರ-2ಎ, ಪ್ರ-3ಎ ಮತ್ತು ಪ್ರ-3 ಬಿಗೆ ಸೇರಿದ್ದು (ವಿಶ್ವಕರ್ಮ ಮತ್ತು ಉಪಜಾತಿಗಳು, ಅಲ್ಪ ಸಂಖ್ಯಾತರು ಮತ್ತು ಉಪಜಾತಿಗಳು, ಉಪ್ಪಾರ ಮತ್ತು ಉಪಜಾತಿಗಳು ಹಾಗೂ ಬೆಸ್ತ/ಅಂಬಿಗ ಮತ್ತು ಅದರ ಉಪಜಾತಿಗಳನ್ನು ಹೊರತುಪಡಿಸಿ) ವಿದ್ಯಾರ್ಥಿ ಮತ್ತು ಕುಟುಂಬದ ವಾರ್ಷಿಕ ವರಮಾನ ರೂ> 3.50 ಲಕ್ಷಗಳ ಮಿತಿಯಲ್ಲಿ ಇರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆನ್-ಲೈನ್ ಮೂಲಕ ಅಹ್ವಾನಿಸಲಾಗಿದೆಸಾಲ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವೆಬ್ ಸ್ಶೆಟ್WWW.Karnataka.gov.in/dbcdc ರಲ್ಲಿ Mozilla firefox web browser ನಲ್ಲಿ ಲಾಗಿನ್ ಆಗಿ ವೆಬ್‍ಸ್ಶೆಟ್‍ನಲ್ಲಿ ಲಭ್ಯವಿರುವ username-dcet2019 ಮತ್ತು Passward-dcet@123 ನ್ನು ನಮೂದಿಸಿ ಅರ್ಜಿಯನ್ನು ಆನ್‍ಲೈನ್ ನಲ್ಲಿ ಭರ್ತಿ ಮಾಡಬೇಕು. ಈ ಕೆಳಕಂಡ ದಾಖಲೆಗಳನ್ನು ಸ್ಕಾನ್ ಮಾಡಿ ಅರ್ಜಿಯೊಂದಿಗೆ ಆನ್‍ಲೈನ್‍ನಲ್ಲಿ ಜುಲೈ 20 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿಯಾದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರೆಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್, ಮಂಗಳೂರು ಕಚೇರಿಯನ್ನು ಅಥವಾ ನಿಗಮದ ವೆಬ್‍ಸ್ಶೆಟ್ WWW.Karnataka.gov.in/dbcdc ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.