ಸುಳ್ಯ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿ ➤ ಮೂವರು ಮೃತ್ಯು, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಜು.14. ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿಯುಂಟಾದ ಪರಿಣಾಮ ಮೂವರು ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಭಾನುವಾರದಂದು ಸುಳ್ಯದಲ್ಲಿ ನಡೆದಿದೆ.

ಮೃತಪಟ್ಟವರನ್ನು ಬೆಂಗಳೂರು ಮೂಲದ ರಾಮನಗರ ಜಿಲ್ಲೆಯ ನಿವಾಸಿಗಳಾದ ಮಂಜುಳಾ, ಸೋಮಣ್ಣ ಹಾಗೂ ನಾಗೇಂದ್ರ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಮಡಿಕೇರಿ ಮಾರ್ಗವಾಗಿ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗೆ ಸುಳ್ಯ ಸಮೀಪದ ಅರಂಬೂರು ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ರಿಟ್ಝ್ ಕಾರು ರಿಕ್ಷಾವೊಂದನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಮುಖಾಮುಖಿ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ► ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳೊಂದಿಗೆ ಮೂವರ ಬಂಧನ

error: Content is protected !!
Scroll to Top