ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಜಗಳ ➤ ಚೂರಿಯಿಂದ ಇರಿದು ಹೆಂಡತಿಯ ಕೊಂದ ಗಂಡ



(ನ್ಯೂಸ್ ಕಡಬ) newskadaba.com ಪುತ್ತೂರು, ಜು.19. ನವ ವಿವಾಹಿತೆಯನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಲೆಗೈದ ಘಟನೆ ಪುತ್ತೂರಿನ ಅರ್ಲಪದವು ಸಮೀಪದ ಕಲ್ಲಪದವು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.







ಮೃತರನ್ನು ಅಕ್ಷತಾ(22) ಎಂದು ಗುರುತಿಸಲಾಗಿದೆ. ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಯ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವೇರ್ಪಟ್ಟಿದ್ದು, ಈ ವೇಳೆ ಪತಿ ಗಣೇಶ್ (35) ತನ್ನ ಪತ್ನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡ ಅಕ್ಷತಾರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪುತ್ತೂರು ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.






error: Content is protected !!
Scroll to Top