ಕರಾವಳಿಯಲ್ಲಿ ಮುಂದುವರಿದ ಮಳೆ ➤ ನಾಳೆ (ಮಂಗಳವಾರ) ಶಾಲಾ ಕಾಲೇಜುಗಳಿಗೆ ರಜೆ



(ನ್ಯೂಸ್ ಕಡಬ) newskadaba.com ಮಂಗಳೂರು, ಜು.22. ಕರ್ನಾಟಕದ ಕರಾವಳಿ ಭಾಗದಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 25 ರ ವರೆಗೆ ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ಹೊರಡಿಸಿದ್ದು, ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.







ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.






error: Content is protected !!
Scroll to Top