ಕರ್ನಾಟಕ ಸರ್ಕಾರ, ಪ್ರವಾಸೋದ್ಯಮ ಇಲಾಖೆ ➤ ಉಚಿತ ಹೋಟೆಲ್ ಮ್ಯಾನೇಜ್ಮೆಂಟ್ ಅಲ್ಪಾವಧಿ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಕರ್ನಾಟಕ ಸರ್ಕಾರ, ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಹೋಟೆಲ್ ಉದ್ಯಮದಲ್ಲಿ ಪರಿಣಿತ ಮಾನವ ಸಂಪನ್ಮೂಲವನ್ನು ಹೆಚ್ಚಿಸಲು ಕೌಶಲ್ಯ ಅಭಿವೃದ್ಧಿ ತರಬೇತಿ ಯೋಜನೆಯಡಿಯಲ್ಲಿ ತರಬೇತಿಯನ್ನು ಆಯೋಜಿಸಲಾಗಿದೆ.

ನಿರುದ್ಯೋಗಿ ಯುವಕ ಯುವತಿಯರಿಗೆ ಉಚಿತ ಹೋಟೆಲ್ ಮ್ಯಾನೇಜ್‍ಮೆಂಟ್ ಅಲ್ಪಾವಧಿ ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0821-2445388 ಸಂಪರ್ಕಿಸಲು ತರಬೇತಿ ಮತ್ತು ಉದ್ಯೋಗ ಶಾಖೆ, ಫುಡ್ ಕ್ರಾಪ್ಟ್ ಇನ್‍ಸ್ಟಿಟ್ಯೂಟ್, ಮೈಸೂರು ಇವರ ಪ್ರಕಟಣೆ ತಿಳಿಸಿದೆ.

Scroll to Top