ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ➤ ವಿಕಲಚೇತನರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.27.2019-20ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ನೀಡುವ ಸೌಲಭ್ಯಗಳಾದ ಆಧಾರ ಯೋಜನೆ ಮತ್ತು ಯಂತ್ರಚಾಲಿತ ದ್ವಿಚಕ್ರ ವಾಹನ ನೀಡುವ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.


ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳ ಕಚೇರಿ ಮಂಗಳೂರು ಅಥವಾ ತಾಲ್ಲೂಕಿನ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಲ್ಲಿ ಅಥವಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಅಗಸ್ಟ್ 15.ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ :-www.dwdsc.kar.nic.in ದೂರವಾಣಿ ಸಂಖ್ಯೆ: 0824-2458173 / 2455999 ಅಥವಾ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯವರ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ದ.ಕ.ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ

error: Content is protected !!
Scroll to Top