ದ. ಕ ಜಿಲ್ಲೆಯಲ್ಲಿ ನೆರೆ ಹಾನಿ ವೀಕ್ಷಣೆಗೆಂದು ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ➤ ಹೊಸ ಮನೆ ನಿರ್ಮಾಣದ ಭರವಸೆ ನೀಡಿದ ಸಿ.ಎಂ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆಗಸ್ಟ್.12.ಇಂದು ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೆರೆಹಾವಳಿಯಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಣೆಮಾಡಿದರು.

ಬಳಿಕ ನೇರವಾಗಿ ಧರ್ಮಸ್ಥಳಕ್ಕೆ ತೆರಳಿದ ಬಿ.ಎಸ್.ವೈ. ಅವರು ಅಲ್ಲಿ ಮಂಜುನಾಥ ಸ್ವಾಮಿಯ ದರ್ಶನವನ್ನು ಪಡೆದು ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.ಸ್ಥಳೀಯ ಶಾಸಕರಾಗಿರುವ ಹರೀಶ್ ಪೂಂಜಾ, ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಭಾರತೀಯ ಜನತಾ ಪಕ್ಷದ ಶಾಸಕರು ಮತ್ತು ಸ್ಥಳೀಯ ಮುಖಂಡರು ಬಿ.ಎಸ್.ವೈ. ಅವರಿಗೆ ಸಾಥ್ ನೀಡಿದರು.ನೆರೆಪೀಡಿತ ಪ್ರದೇಶಗಳಲ್ಲಿ ಪ್ರವಾಹದಿಂದ ಉಂಟಾದ ಸಮಸ್ಯೆಯ ಕೇಳಿ ಗಂಭೀರತೆ ಕೇಳಿ ಮುಖ್ಯಮಂತ್ರಿ ಯಡಿಯೂರಪ್ಪ ಆತಂಕ ವ್ಯಕ್ತಪಡಿಸಿದರು.

ಶಾಸಕ ಹರೀಶ್ ಪೂಂಜ, ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳೀನ್ ಕುಮಾರ್, ಪ್ರಭಾಕರ್ ಭಟ್ ಮತ್ತಿರರು ಮುಖ್ಯಮಂತ್ರಿಯವರಿಗೆ ನೆರೆ ಹಾನಿಯ ಬಗ್ಗೆ ಮಾಹಿತಿ ನೀಡಿದರು.ಭಾರಿ ಮಳೆ, ಪ್ರವಾಹದಿಂದಾಗಿ ಈ ಭಾಗದಲ್ಲಿ 321 ಭಾಗಶಃ ಹಾನಿಯಾದ ಮನೆಗಳಿದ್ದು, 275 ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ. ತಾತ್ಕಾಲಿಕ ಪ್ರತಿ ಕುಟುಂಬಕ್ಕೆ 10 ಸಾವಿರ ಪರಿಹಾರ ಘೋಷಣೆ ಮಾಡಿದ ಸಿಎಂ, ಸಂಪೂರ್ಣ ಹಾನಿಯಾದ ಮನೆಗೆ ಹೊಸಮನೆ ನಿರ್ಮಾಣ ಭರವಸೆ ನೀಡಿದರು.ಹೊಸ ಮನೆ ನಿರ್ಮಾಣ ಆಗುವವರೆಗೆ ತಾತ್ಕಾಲಿವಾಗಿ 5 ಸಾವಿರ ಬಾಡಿಗೆ, ಪ್ರತಿ ಮನೆ ರಿಪೇರಿಗೆ 1 ಲಕ್ಷ ತಕ್ಷಣ ಪರಿಹಾರ, ಹೊಸ ಮನೆ ನಿರ್ಮಾಣಕ್ಕೆ 5 ಲಕ್ಷ ಕೊಡುವ ಘೋಷಣೆ ಮಾಡಿದರು.

Also Read  ಇಂದು ವಿ.ವಿ ಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

 

error: Content is protected !!
Scroll to Top