ಕಬಕ: ಬಸ್ ಹಾಗೂ ಕಾರು ನಡುವೆ ಢಿಕ್ಕಿ ➤ ಕಾರು ಚಾಲಕ ಮೃತ್ಯು



(ನ್ಯೂಸ್ ಕಡಬ) newskadaba.com ಪುತ್ತೂರು, ಆ.12. ಖಾಸಗಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕಬಕ ಎಂಬಲ್ಲಿ ಸೋಮವಾರದಂದು ಸಂಭವಿಸಿದೆ.







ಮೃತ ವ್ಯಕ್ತಿಯನ್ನು ಮುಂಡೋಳೆ ನಿವಾಸಿ ಸಿದ್ದೀಕ್ ಅಝ್ಹರಿ ಉಸ್ತಾದ್ ರವರ ಸಹೋದರ ಅಬ್ದುಲ್ ಹಕೀಂ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಮಾರುತಿ ಆಲ್ಟೋ 800 ಕಾರು ನಡುವೆ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಢಿಕ್ಕಿ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top