ದ.ಕ.: ಇಂದಿನಿಂದ ಶನಿವಾರ ಸಂಜೆಯವರೆಗೆ ನಡೆಯಲಿವೆ ತರಗತಿಗಳು ➤ ಭಾರೀ ಮಳೆಗೆ ನೀಡಲಾಗಿದ್ದ ರಜೆಯನ್ನು ಸರಿದೂಗಿಸಲು ಕ್ರಮ



(ನ್ಯೂಸ್ ಕಡಬ) newskadaba.com ಮಂಗಳೂರು, ಆ.24. ಇತ್ತೀಚೆಗೆ ಕರಾವಳಿಯಲ್ಲಿ ಸುರಿದ ಭಾರೀ ಮಳೆ ಹಾಗೂ ಪ್ರವಾಹ ಭೀತಿಯಿಂದಾಗಿ ಶಿಕ್ಷಣ ಸಂಸ್ಥೆಗಳಿಗೆ ನೀಡಲಾಗಿದ್ದ ಹೆಚ್ಚುವರಿ ರಜೆಯನ್ನು ಸರಿದೂಗಿಸುವ ಉದ್ದೇಶದಿಂದ ಇಂದಿನಿಂದ ಪ್ರತೀ ಶನಿವಾರ ಮಧ್ಯಾಹ್ನದ ಬಳಿಕವೂ ತರಗತಿಗಳನ್ನು ನಡೆಸುವಂತೆ ಶಿಕ್ಷಣ ಇಲಾಖೆಯು ಸಂಬಂಧಿಸಿದ ಶಾಲೆಗಳಿಗೆ ಸೂಚನೆ ನೀಡಿದೆ.







ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಒಟ್ಟು 13 ಶನಿವಾರ ಹಾಗೂ ಉಳಿದ ಕಡೆಗಳಲ್ಲಿ 12 ಶನಿವಾರದಂದು ಸಂಜೆಯವರೆಗೆ ತರಗತಿಗಳು ನಡೆಯಲಿದ್ದು, ಆದರೆ ರವಿವಾರ ಯಾವುದೇ ತರಗತಿಗಳು ನಡೆಯುವುದಿಲ್ಲ ಎಂದು ದಕ್ಷಿಣ ಕನ್ನಡ ಡಿಡಿಪಿಐ ವೈ. ಶಿವರಾಮಯ್ಯ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.






error: Content is protected !!
Scroll to Top