(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.30.ಹವಾಮಾನ ವೈಪರಿತ್ಯದಿಂದಾಗಿ ಅಡಿಕೆ ಬೆಳೆಗೆ ಕೊಳೆರೋಗವು ಬಾಧಿಸಿ ಹೆಚ್ಚಿನ ನಷ್ಟವನ್ನುಂಟು ಮಾಡುವ ಸಾಧ್ಯತೆ ಇರುತ್ತದೆ.
ಕಳೆದ ವರ್ಷ ಕೊಳೆರೋಗ ಬಂದ ತೋಟಗಳಲ್ಲಿ ರೋಗಾಣು ಸುಪ್ತಾವಸ್ಥೆಯಲ್ಲಿದ್ದು, ಈಗ ಪೂರಕ ವಾತಾವರಣ ಇರುವುದರಿಂದ ಒಮ್ಮೆಲೆ ತೀವ್ರವಾಗುತ್ತದೆ. ಮುಂದೆ ಇದು ಗಾಳಿ ಮುಖಾಂತರ ಹರಡುತ್ತಾ ಹೋಗುತ್ತದೆ. ಆದ್ದರಿಂದ ರೈತರು ಮಳೆ ಬಿಡುವಿದ್ದಾಗ ರೋಗ ಬಂದಿರುವ ತೋಟಗಳಲ್ಲಿ ಶೇ. 1 ರ ಬೋರ್ಡೋ ದ್ರಾವಣವನ್ನು ತಯಾರಿಸಿ ಸಿಂಪಡಿಸಬೇಕು. ಕಾಳುಮೆಣಸು ಸೊರಗು ರೋಗ ನಿಯಂತ್ರಿಸಲು ಶೇ. 1 ರ ಬೋರ್ಡೋದ್ರಾವಣವನ್ನು ಬಳ್ಳಿಗಳ ಎಲ್ಲಾ ಎಲೆಗಳಿಗೆ ಬೀಳುವಂತೆ ಸೂಕ್ಷ್ಮವಾಗಿ ಸಿಂಪಡಿಸಬೇಕು ಹಾಗೂ ಅದೇ ದ್ರಾವಣವನ್ನು ಬಳ್ಳಿಗಳ ಬುಡಕ್ಕೂಸಿಂಪಡಿಸಬೇಕು.
ಈ ಸಿಂಪರಣೆಯನ್ನು 30-40 ದಿನಗಳ ಅಂತರದಲ್ಲಿ ಪುನಾರವರ್ತಿಸಬೇಕು.ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ, ತೋಟಗಾರಿಕೆ ಉಪನಿರ್ದೇಶಕರ ಕಛೇರಿ, ಜಿಲ್ಲಾ ಪಂಚಾಯತ್ ಮಂಗಳೂರು ದೂರವಾಣಿ ಸಂಖ್ಯೆ: 8277806372 ಸಂಪರ್ಕಿಸಬಹುದಾಗಿದೆ ಎಂದು ಮಂಗಳೂರು ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.