ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕರ್ತವ್ಯ ನಿರ್ವಹಿಸಲು ಕಷ್ಟವಿದೆ: ಸಸಿಕಾಂತ್ ಸೆಂಥಿಲ್ ➤ ಐಎಎಸ್‌ ಗೆ ರಾಜೀನಾಮೆ ನೀಡಿದ ದ.ಕ. ಜಿಲ್ಲಾಧಿಕಾರಿಯ ಪತ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.06. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿಯುತ್ತಿದ್ದು, ಮೂಲಭೂತ ಒತ್ತಡಗಳಿಗೆ ರಾಜಿಯಾಗಿ ಕೆಲಸ ಮಾಡಬೇಕಾದ ಪರಿಸ್ಥಿತಿ ಇರುವುದರಿಂದ ನಾಗರಿಕ ಸೇವೆಯಲ್ಲಿ ಮುಂದುವರಿಯುವುದು ಇಷ್ಟವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.

ಸೆಪ್ಟೆಂಬರ್ 06 ರಂದು ಐಎಎಸ್ ಹುದ್ದೆಗೆ ದಿಢೀರನೆ ರಾಜೀನಾಮೆ ನೀಡಿರುವ ಸಸಿಕಾಂತ್ ಸೆಂಥಿಲ್, ಮುಂದಿನ ದಿನಗಳಲ್ಲಿ ನಮ್ಮ ದೇಶವು ಅತ್ಯಂತ ಕಷ್ಟಕರ ಸವಾಲುಗಳನ್ನು ಎದುರಿಸಲಿದ್ದು, ಆ ಸಂದರ್ಭದಲ್ಲಿ ತನ್ನ ಸಿದ್ದಾಂತಕ್ಕೆ ಎದುರಾಗಿ ಮುಂದುವರಿಯುವುದು ಕಷ್ಟ ಎಂದು ತಿಳಿದು ನಾನು ಐಎಎಸ್ ನಿಂದ ಹೊರಬರುತ್ತಿದ್ದೇನೆ ಎಂದು ಸೆಂಥಿಲ್ ಪತ್ರದಲ್ಲಿ ತಿಳಿಸಿದ್ದಾರೆ.

2009 ರ ಬ್ಯಾಚ್‌ ನ ಐಎಎಸ್‌ ಅಧಿಕಾರಿಯಾಗಿರುವ ಸಸಿಕಾಂತ್‌ ಸೆಂಥಿಲ್‌, ಎಲೆಕ್ಟ್ರಿಕಲ್‌ ಮತ್ತು ಕಮ್ಯುನಿಕೇಶನ್‌ ವಿಷಯದಲ್ಲಿ ಇಂಜಿನಿಯರಿಂಗ್‌ ಪದವಿ ಪಡೆದಿದ್ದಾರೆ‌. ಅಕ್ಟೋಬರ್ 2017 ನಿಂದ ಸಸಿಕಾಂತ್ ಸೆಂಥಿಲ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾಗಿದ್ದರು.

Scroll to Top