ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ➤ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 2019-20ನೇ ಸಾಲಿನ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟಂಬರ್ 14 ರಂದು ಮಂಗಳೂರು ನಗರದ ಮಂಗಳ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಹಾಗೂ ಮಹಾನಗರಪಾಲಿಕೆ, ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸಂಘಟಿಸಲಾಗಿದೆ.


ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಗಳಲ್ಲಿ ವಿಜೇತರಾಗಿ ಪ್ರಥಮ, ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗುತ್ತಾರೆ.ದಸರಾ ಕ್ರೀಡಾಕೂಟದ ಹಾಕಿ, ಬಾಸ್ಕೆಟ್‍ಬಾಲ್, ಟೇಬಲ್ ಟೆನ್ನಿಸ್ ಹ್ಯಾಂಡ್‍ಬಾಲ್, ಬಾಲ್ ಬ್ಯಾಡ್ಮಿಂಟನ್, ಕುಸ್ತಿ ಹಾಗೂ ಶಟಲ್ ಬ್ಯಾಡ್ಮಿಂಟನ್ ಕ್ರೀಡೆಗಳನ್ನು ಪುರುಷರು ಹಾಗೂ ಮಹಿಳೆಯರಿಗೆ ನೇರವಾಗಿ ಜಿಲ್ಲಾ ಮಟ್ಟದ ಕ್ರೀಡಾ ಕೂಟ ಸೆಪ್ಟಂಬರ್ 17 ರಂದು ನಡೆಯಲಿದೆ. ಟೆನ್ನಿಸ್, ನೆಟ್ ಬಾಲ್, ಈಜು ಸ್ಪರ್ಧೆಗಳನ್ನು ಜಿಲ್ಲಾ ಮಟ್ಟದಲ್ಲಿ ಆಯ್ಕೆ ಮಾಡಲಾಗುವುದು.

Also Read  ತೊಕ್ಕೊಟ್ಟು: ವೈಯಕ್ತಿಕ ಕಾರಣ ಮುಂದಿಟ್ಟು ರಿಕ್ಷಾ ಚಾಲಕನಿಗೆ ಚೂರಿ ಇರಿತ..! ➤ ಪ್ರಕರಣ ದಾಖಲು

ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ತಮ್ಮ ರಾಷ್ಟ್ರೀಕೃತ ಬ್ಯಾಂಕ್ ಖಾತೆಯ ಜೆರಾಕ್ಸ್ ಪ್ರತಿಯನ್ನು ಜಿಲ್ಲಾ ಮಟ್ಟದ ಕ್ರೀಡಾಕೂಟದಂದು ಸಂಘಟಕರಿಗೆ ಕಡ್ಡಾಯವಾಗಿ ಸಲ್ಲಿಸಬೇಕು. ಭಾಗವಹಿಸುವ ಸ್ಪರ್ಧಾಳುಗಳು ಸ್ಪರ್ಧೆ ನಡೆಯುವ ದಿನದಂದು ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಮಂಗಳಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ, ಮಂಗಳ ಕ್ರೀಡಾಂಗಣ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top