ಸೆ.13-ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ



(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.12.ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ, ಮಂಗಳೂರು ಇವರ ಸಹಕಾರದೊಂದಿಗೆ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿಯನ್ನು ಆಚರಿಸಲು ನಿರ್ಧರಿಸಿದೆ.







ಸಪ್ಟೆಂಬರ್ 13 ರಂದು ಬೆಳಿಗ್ಗೆ 11 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಜಯ ಸಿ ಸುವರ್ಣ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.ಮುಜರಾಯಿ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮದ ಉದ್ಘಾಟನೆ ನಡೆಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.






error: Content is protected !!
Scroll to Top