ಮಂಗಳೂರು ವಿಶ್ವ ವಿದ್ಯಾನಿಲಯ ➤ ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ಮಂಗಳೂರು ವಿಶ್ವ ವಿದ್ಯಾನಿಲಯ 2019-20ನೇ ಸಾಲಿಗೆ ಎಂ.ಎಡ್.(ರೆಗ್ಯುಲರ್) ಕೋರ್ಸಿಗೆ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದೆ.

ಅಂಗೀಕೃತ ವಿಶ್ವವಿದ್ಯಾನಿಲಯದಿಂದ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಎಂ.ಎಡ್./ಎಂ.ಎ. ಎಜುಕೇಶನ್ ಪದವಿ ಹೊಂದಿರುವ )ಕನಿಷ್ಠ 55% ಅಂಕಗಳೊಂದಿಗೆ) ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ವರ್ಗ, ಸೇವಾನುಭವ, ದೂರವಾಣಿ ಸಂಖ್ಯೆ ಇತ್ಯಾದಿ ಸ್ವವಿವರವುಳ್ಳ ಅರ್ಜಿ ಮತ್ತು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ ಹಾಗೂ ಮೂಲ ದಾಖಲೆಗಳೊಂದಿಗೆ ಸೆಪ್ಟೆಂಬರ್ 19 ರಂದು ಬೆಳಿಗ್ಗೆ 11 ಗಂಟೆಗೆ ಕುಚಿಸಚಿವರ ಕಚೇರಿ, ಆಡಳಿತ ಸೌಧ, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ-574199 ಇಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬೇಕು.

Also Read  ಮುಂಬೈ: ರೆಡ್ ಅಲರ್ಟ್ ಘೋಷಣೆ ➤ಮಹಾರಾಷ್ಟ್ರ ದ ಜನರನ್ನು ಆತಂಕಕ್ಕೆ ನೂಕಿರುವ ವರ್ಷಧಾರೆ

ಎನ್.ಇ.ಟಿ/ಎಸ್.ಎಲ್.ಇ.ಟಿ. ಉತ್ತೀಣ್ತೆ/ಪಿ.ಹೆಚ್.ಡಿ. ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ವಿವರಗಳನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.mangaloreuniversity.ac.in ಇದರಲ್ಲಿ ಪಡೆಯಬಹುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರ ಪ್ರಕಟನೆ ತಿಳಿಸಿದೆ.

error: Content is protected !!
Scroll to Top