ಕೃಷಿಗೆ ಸಂಬಂಧಿಸಿದ ಸರ್ಕಾರಿ ಯೋಜನೆಗಳ ಸದ್ಬಳಕೆಯಾಗಲಿ ➤ ಕೃಷ್ಣ ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.14.ಗಂಗಾಕಲ್ಯಾಣ ಯೋಜನೆಯು ಸಾಕಷ್ಟು ರೈತಾಪಿ ಜನಗಳ ಆರ್ಥಿಕ ಅಭಿವೃದ್ದಿಗೆ ಮತ್ತು ಕೃಷಿ ಉತ್ಪನ್ನಗಳನ್ನು ಹೆಚ್ಚಾಗುವುದಕ್ಕೆ ಸಹಾಯಕಾರಿಯಾಗಿದೆ, ಆದ್ದರಿಂದ ಇಂತಹ ಯೋಜನೆಗಳನ್ನು ಸರಿಯಾಗಿ ಸದ್ಬಳಿಕೆ ಮಾಡಿಕೊಳ್ಳಬೇಕು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಕುಮಾರ್ ಹೇಳಿದರು.


ಶುಕ್ರವಾರ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಭಾರತೀಯ ಕೃಷಿ ಅನುಸಂದಾನ ಪರಿಷತ್‍ನ ಕೃಷಿ ವಿಜ್ಞಾನ ಕೇಂದ್ರ ಕಂಕನಾಡಿ ಇವರ ಜಂಟಿ ಆಶ್ರಯದಲ್ಲಿ ನಿಗಮದ ಗಂಗಾಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆದ ಫಲಾನುಭವಿಗಳಿಗೆ “ಮಂಥನ/ಪ್ರಾದೇಶಿಕ ರೈತ ವಿನಿಮಯ” ಕಾರ್ಯಗಾರವನ್ನು ಕೃಷಿ ವಿಜ್ಞಾನ ಕೇಂದ್ರ ಕಂಕನಾಡಿ, ಮಂಗಳೂರಿನಲ್ಲಿ ಏರ್ಪಡಿಸಲಾಗಿತ್ತು.

ಈ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಿಗಮದಿಂದ ದೊರೆಯುವ ಯೋಜನೆಗಳು ಸಂಪೂರ್ಣವಾಗಿ ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ದೊರೆಯಬೇಕು ಎನ್ನುವುದೇ ಡಿ. ದೇವರಾಜ ಅರಸುರವರ ಅಭಿಲಾಷೆ ಆಗಿತ್ತು, ಸಾಕಷ್ಟು ಬಡವರ ಪರ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸಲಾಗುತ್ತಿದೆ, ಕೃಷಿಗೆ ರೂ.2 ಲಕ್ಷದವರೆಗೆ ಸಾಲ ಸೌಲಭ್ಯವನ್ನು ವಾರ್ಷಿಕ ಶೇಕಡ 4ರಷ್ಟು ಬಡ್ಡಿದರ ಸರ್ಕಾರ ನೀಡುತ್ತಿದೆ, ಅದೇ ರೀತಿಯಲ್ಲಿ ಗಂಗಾಕಲ್ಯಾಣ ಯೋಜನೆಯಂತಹ ಹಲವಾರು ಯೋಜನೆಗಳು ರೈತರಿಗೆ ಲಭಿಸಲಿ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತಂದಿವೆ.

Also Read  ಪಡುಬಿದ್ರಿ: ಟ್ಯಾಂಕರ್ ಮತ್ತು ಸ್ಕೂಟರ್‌ ನಡುವೆ ಅಪಘಾತ   ➤  ಇಬ್ಬರು ಸ್ಥಳದಲ್ಲೇ ಮೃತ್ಯು

ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಮತ್ತು ಹೆಚ್ಚು ಸಾವಯವ ಕೃಷಿಯನ್ನು ಅವಲಂಬಿಸಿ ಭೂಮಿಯ ಫಲವತ್ತತೆಯನ್ನು ಕಾಪಾಡಿ ಎಂದು ರೈತರಿಗೆ ಸಲಹೆ ನೀಡಿದರು.ಕಾರ್ಯಗಾರದ ಅಧ್ಯಕ್ಷತೆ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಟಿ.ಜೆ. ರಮೇಶ್ ವಹಿಸಿ, ಕೈಗಾರೀಕರಣ ಮತ್ತು ನಗರೀಕರಣ ಹೆಚ್ಚಾದಂತೆ ನೀರಿನ ಕೊರತೆ ಉಂಟಾಗುತ್ತಿದೆ, ಆದ್ದರಿಂದ ಮಳೆ ನೀರು ಸಾಕಷ್ಟು ಪ್ರಮಾಣದಲ್ಲಿ ಪೋಲಾಗುತ್ತಿದೆ, ನೀರಿನ ಸಂರಕ್ಷಣೆಯನ್ನು ಮಳೆ ನೀರು ಕೊಯ್ಲುಗಳಿಂದ ಸಂಗ್ರಹಿಸಿ ಸಮರ್ಪಕ ಬಳಕೆ ಮಾಡಿಕೊಳ್ಳಬೇಕು. ಸಂಪ್ರಾದಾಯಿಕ ಕೃಷಿಯಿಂದ ಹೊರ ಬಂದು (ಆಧುನಿಕ ಕೃಷಿ) ವ್ಶೆಜ್ಞಾನಿಕ ಕೃಷಿಗೆ ಹೆಚ್ಚು ಒತ್ತು ನೀಡಿ, ಮತ್ತು ಈ ಕಾರ್ಯಗಾರದಲ್ಲಿ ಕೃಷಿಗೆ ಸಂಬಂಧಿಸಿದ ತಾಂತ್ರಿಕ ಮಾಹಿತಿಯನ್ನು ಇಲಾಖಾ ಸಂಪನ್ಮೂಲ ವ್ಯಕ್ತಿಗಳಿಂದ ಪಡೆದು ಕೃಷಿ ಪದ್ದತಿಗೆ ಅಳವಡಿಸಿಕೊಳ್ಳಿ ಎಂದು ಹೇಳಿದರು. ಕಾರ್ಯಗಾರದಲ್ಲಿ ಮಿನುಗಾರಿಕೆ ಇಲಾಖೆಯ ಹಿರಿಯ ವಿಜ್ಞಾನಿ ಡಾ.ಚೇತನ್, ತೊಟಗಾರಿಕೆ ಇಲಾಖೆ ಅಧಿಕಾರಿ ಪ್ರವೀಣ್ ಮತ್ತು ಫಲಾನುಭವಿ ರೈತರು ಹಾಗೂ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.

Also Read  ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯಾ ವಿಮಾನದಲ್ಲಿ ಗೌರವಾರ್ಪಣೆ

error: Content is protected !!
Scroll to Top