ದ .ಕ ಜಿ. ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ➤ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕರ್ನಾಟಕ ,ಸಪ್ಟೆಂಬರ್.20.ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಮಹಾನಗರಪಾಲಿಕೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 2019-20 ನೇ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ನಡೆಯಲಿದೆ.

ಅಥ್ಲೆಟಿಕ್ಸ್, ವಾಲಿಬಾಲ್, ಬಾಸ್ಕೇಟ್ ಬಾಲ್, ಹ್ಯಾಂಡ್ ಬಾಲ್, ಕುಸ್ತಿ, ಟೇಬಲ್ ಟೆನ್ನಿಸ್, ನೆಟ್ ಬಾಲ್, ಭಾರ ಎತ್ತುವುದು ಮತ್ತು ಬಾಲ್ ಬ್ಯಾಡ್ಮಿಂಟನ್ ಸ್ವರ್ಧೆಗಳು ಸಪ್ಟೆಂಬರ್ 21 ರಿಂದ 22 ರವರೆಗೆ ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.ಮೈಸೂರು ವಿಭಾಗಕ್ಕೆ ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ಈ ಕ್ರೀಡಾಕುಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

Also Read  ರಾಜ್ಯ ಸರಕಾರದಿಂದ ಭರ್ಜರಿ ಗುಡ್ ನ್ಯೂಸ್ - ಗೃಹಜ್ಯೋತಿ ಯೋಜನೆಯಡಿ ಮೂರು ಜ್ಯೋತಿಗಳು ವಿಲೀನ

ಅಥ್ಲೆಟಿಕ್ಸ್, ವಾಲಿಬಾಲ್, ಬಾಸ್ಕೇಟ್ ಬಾಲ್, ಹ್ಯಾಂಡ್ ಬಾಲ್, ಕುಸ್ತಿ, ಟೇಬಲ್ ಟೆನ್ನಿಸ್, ನೆಟ್ ಬಾಲ್, ಭಾರ ಎತ್ತುವುದು ಮತ್ತು ಬಾಲ್ ಬ್ಯಾಡ್ಮಿಂಟನ್ ಸ್ವರ್ಧೆಗಳಲ್ಲಿ ವಿಜೇತರಾಗಿ ಭಾಗವಹಿಸಲು ಅರ್ಹರಾದ ಕ್ರೀಡಾಪಟುಗಳು ಸಪ್ಟೆಂಬರ್ 21 ರಂದು ಬೆಳಿಗ್ಗೆ 9.30 ಗಂಟೆಗೆ ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿ ವರದಿ ಮಾಡಿಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ದೂರವಾಣಿ ಸಂಖ್ಯೆ : 0824-2451264 ಇಲ್ಲಿ ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Gems

error: Content is protected !!
Scroll to Top