ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ➤ ಜಿಲ್ಲಾಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.21.ಜಿಲ್ಲಾಡಳಿತದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಹಾಗೂ ಅನುಪಮ ಸೇವೆ ಸಾಧನೆಗೈದ ವ್ಯಕ್ತಿಗಳನ್ನು ಗುರುತಿಸಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಣೆಯ ಸಂಧರ್ಭದಲ್ಲಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತದೆ.


2019ನೇ ಸಾಲಿನ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ನೀಡುವ ಜಿಲ್ಲಾ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತ ಕಲೆಗಳು, ಸಮಾಜ ಸೇವೆ, ಜಾನಪದ, ಪರಿಸರ – ವಿಜ್ಞಾನ, ವೈದ್ಯಕೀಯ, ಸಂಶೋಧನೆ, ಪತ್ರಿಕೋದ್ಯಮ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಗಣ್ಯರು ಅರ್ಜಿಯನ್ನು ತಮ್ಮ ಸೇವೆ/ಸಾಧನೆಯ ಕ್ಷೇತ್ರ ಹಾಗೂ ಸಂಕ್ಷಿಪ್ತ ದಾಖಲೆ , ವಿವರಣೆಗಳೊಂದಿಗೆ ಅಕ್ಟೋಬರ್ 19 ರಂದು ಸಂಜೆ 5 ಗಂಟೆಯೊಳಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ನೀಡುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Also Read  ಮಂಗಳೂರು: ಉಪನ್ಯಾಸಕರಿಗೆ ಹೊಸ ಪಠ್ಯಕ್ರಮದ ಬಗ್ಗೆ ತರಬೇತಿ ಕಾರ್ಯಾಗಾರ

error: Content is protected !!
Scroll to Top