ನೆಲ್ಯಾಡಿ: ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ ➤ 29 ಜಾನುವಾರುಗಳ ಸಹಿತ ಓರ್ವನ ಬಂಧನ, ಮೂವರು ಪರಾರಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.01. ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿರುವ ಪೊಲೀಸರು 29 ಜಾನುವಾರುಗಳ ಸಹಿತ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ಮಂಗಳವಾರದಂದು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿಯಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಲಾರಿ ಚಾಲಕ ಹಾಸನ ಜಿಲ್ಲೆಯ ಹೊಳೆನರಸೀಪುರ ನಿವಾಸಿ ಇಮ್ರಾನ್ ಪಾಷಾ (30) ಎಂದು ಗುರುತಿಸಲಾಗಿದೆ. ಲಾರಿಯಲ್ಲಿದ್ದ ಹಾಸನದ ಸಯ್ಯದ್‌‌ ಅಶ್ಫಾಕ್, ಜಯಣ್ಣ, ಬುಲ್ಲಿ ಪರಾರಿಯಾಗಿದ್ದಾರೆ. ಆರೋಪಿಗಳು ಹಾಸನ ಕಡೆಯಿಂದ ಈಚರ್ ಲಾರಿಯಲ್ಲಿ 29 ಜಾನುವಾರುಗಳನ್ನು ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದ ವೇಳೆ ನೆಲ್ಯಾಡಿ ಬೆಥನಿ ಶಾಲೆಯ ಬಳಿ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಲಾದ ಜಾನುವಾರು ಮತ್ತು ವಾಹನದ ಒಟ್ಟು ಮೌಲ್ಯ ರೂ 10,15,000/- ಎಂದು ಅಂದಾಜಿಸಲಾಗಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ : 4,5,9,11 ಗೋಹತ್ಯೆ ನಿಷೇದ ಕಾಯ್ದೆ 1964 ಮತ್ತು ಕಲಂ: 11(ಡಿ) ಪ್ರಾಣಿ ಹಿಂಸೆ ನಿಷೇದ ಕಾಯ್ದೆ 1960 ಮತ್ತು ಕಲಂ :66 ಜೊತೆಗೆ 192 (ಎ) ಐಎಂವಿ ಅ್ಯಕ್ಟ್ ನಂತೆ ಪ್ರಕರಣ ದಾಖಲಿಸಲಾಗಿದೆ.

error: Content is protected !!

Join the Group

Join WhatsApp Group