ಸುಳ್ಯ: ಬಸ್ ಹಾಗೂ ಇನ್ನೋವಾ ನಡುವೆ ಢಿಕ್ಕಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು ➤ ಕಳೆದ ವಾರ ನಾಲ್ವರನ್ನು ಬಲಿ ತೆಗೆದುಕೊಂಡ ಸ್ಥಳದಲ್ಲೇ ದುರ್ಘಟನೆ



(ನ್ಯೂಸ್ ಕಡಬ) newskadaba.com ಸುಳ್ಯ, ಅ.11. ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಹಾಗೂ ಇನ್ನೋವಾ ಕಾರು ನಡುವೆ ಢಿಕ್ಕಿಯುಂಟಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಸುಳ್ಯದ ಅಡ್ಕಾರ್ ಸಮೀಪದ ಮಾವಿನಕಟ್ಟೆ ಎಂಬಲ್ಲಿ ಶುಕ್ರವಾರ ಸಾಯಂಕಾಲ ಸಂಭವಿಸಿದೆ.





ಮೃತರನ್ನು ಪುತ್ತೂರು ಸಮೀಪದ ಕಬಕ ವಿದ್ಯಾಪುರ ನಿವಾಸಿ ಅಬ್ದುಲ್ ಮಜೀದ್ ಹಾಗೂ ಕಬಕ ನಿವಾಸಿ ಸಾದಿಕ್ ಎಂದು ಗುರುತಿಸಲಾಗಿದೆ. ಸುಳ್ಯದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಇನ್ನೋವಾ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸಿದ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಮಜೀದ್ ರವರ ವಿವಾಹವು ಪುತ್ತೂರಿನ ಯುವತಿಯೊಂದಿಗೆ ಅಕ್ಟೋಬರ್ 20 ಕ್ಕೆ ನಡೆಯುವುದಾಗಿ ನಿಗದಿಯಾಗಿತ್ತು ಎನ್ನಲಾಗಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top