ಮಿತ್ತೂರು: ಬಸ್ – ಟಿಪ್ಪರ್ ಢಿಕ್ಕಿ ➤ ಹಲವರಿಗೆ ಗಾಯ



(ನ್ಯೂಸ್ ಕಡಬ) newskadaba.com ಪುತ್ತೂರು, ಅ.12. ಖಾಸಗಿ ಬಸ್ ಹಾಗೂ ಟಿಪ್ಪರ್ ನಡುವೆ ಢಿಕ್ಕಿಯುಂಟಾದ ಪರಿಣಾಮ ಹಲವರು ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಿತ್ತೂರು ಬಳಿ ಶನಿವಾರದಂದು ಸಂಭವಿಸಿದೆ.







ಪುತ್ತೂರಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟಿಪ್ಪರ್ ಮಧ್ಯೆ ಮಿತ್ತೂರು ಬಳಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top