ನಕಲಿ ಟಿಕ್‍ಟಾಕ್ ಖಾತೆ ತೆರೆದು ಮಹಿಳೆಯ ಅಶ್ಲೀಲ ವೀಡಿಯೋ ವೈರಲ್ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ.14. ಟಿಕ್‍ಟಾಕ್ ನಕಲಿ ಖಾತೆ ತೆರೆದು ಮಹಿಳೆಯ ಅಶ್ಲೀಲ ವಿಡಿಯೋವನ್ನು ವೈರಲ್ ಮಾಡಿದ ಆರೋಪಿಯನ್ನು ಬಂಧಿಸಿರುವ ಶಿವಮೊಗ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಬಂಧಿತ ಆರೋಪಿಯನ್ನು ಭದ್ರಾವತಿಯ ಗೋಣಿಬೀಡು ನಿವಾಸಿ ಸಂಜಯ್ ಕುಮಾರ್ (23) ಎಂದು ಗುರುತಿಸಲಾಗಿದೆ. ಬೆಂಗಳೂರಲ್ಲಿ ಕ್ಯಾಬ್ ಚಾಲಕನಾಗಿ ದುಡಿಯುತ್ತಿದ್ದ ಸಂಜಯ್ ಮಹಿಳೆಯೋರ್ವರ ಹೆಸರಿನಲ್ಲಿ ನಕಲಿ ಟಿಕ್‍ಟಾಕ್ ಖಾತೆ ತೆರೆದಿದ್ದಲ್ಲದೆ ಅದೇ ಮಹಿಳೆಯ ವಿಡಿಯೋಗೆ ಅಶ್ಲೀಲ ಧ್ವನಿ ನೀಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಮಹಿಳೆಯು ಶಿವಮೊಗ್ಗ ಠಾಣೆಗೆ ನೀಡಿದ ದೂರಿನಂತೆ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Also Read  ವಕ್ಫ್ ವಿರುದ್ಧ ಸಿಡಿದೆದ್ದ ಬಿಜೆಪಿ: 'ನಮ್ಮ ಭೂಮಿ, ನಮ್ಮ ಹಕ್ಕು’ ಘೋಷಣೆಯಡಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭ

error: Content is protected !!
Scroll to Top