ಆಸ್ತಿ ವಿಚಾರಕ್ಕೆ ಸಹೋದರರ ನಡುವೆ ಜಗಳ ➤ ಓರ್ವನ ಕೊಲೆಯಲ್ಲಿ ಅಂತ್ಯ



(ನ್ಯೂಸ್ ಕಡಬ) newskadaba.com ಮಂಗಳೂರು, ಅ.18. ಆಸ್ತಿಯ ವಿಚಾರಕ್ಕೆ ಸಹೋದರರ ನಡುವೆ ನಡೆದ ಗಲಾಟೆಯು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮಂಗಳೂರಿನಲ್ಲಿ ಗುರುವಾರ ತಡರಾತ್ರಿ ನಡೆದಿದೆ.







ತನ್ನ ಸಹೋದರನಿಂದ ಚೂರಿ ಇರಿತಕ್ಕೊಳಗಾಗಿ ಕೊಲೆಯಾದ ವ್ಯಕ್ತಿಯನ್ನು ಮಂಗಳೂರಿನ ಬೆಂಗ್ರೆ ನಿವಾಸಿ ಮುಸ್ತಫಾ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಆಸ್ತಿ ಮತ್ತು ಮನೆಯ ವಿಚಾರಕ್ಕೆ ಮುಸ್ತಫಾ ಹಾಗೂ ಅಬ್ದುಲ್ ರಹಿಮಾನ್ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಆರೋಪಿ ಅಬ್ದುಲ್ ರಹ್ಮಾನ್ ಚೂರಿಯಿಂದ ಮುಸ್ತಾಫರಿಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ಮುಸ್ತಾಫರನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ತಡರಾತ್ರಿ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.






ಆರೋಪಿಯನ್ನು ಬಂಧಿಸಿರುವ ಪಣಂಬೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top