ನೆಟ್ಟಣ: ರೈಲಿನಲ್ಲಿ ಮಹಿಳೆಗೆ ಕೀಟಲೆ ನೀಡಿದ ಗುಮಾನಿ ➤ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.23. ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಹಾಗೂ ಆತನ ಜೊತೆಗಿದ್ದ ಎನ್ನಲಾದ ಮತ್ತೋರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರದಂದು ಸುಬ್ರಹ್ಮಣ್ಯ ರೋಡ್ – ಮಂಗಳೂರು ರೈಲಿನಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಬೆಂಗಳೂರಿನ ಕೆಂಗೇರಿ ನಿವಾಸಿ ಮಂಜು(27) ಎಂದು ಗುರುತಿಸಲಾಗಿದೆ. ನೆಟ್ಟಣದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲಿನ ಮಹಿಳಾ ಬೋಗಿಗೆ ಹತ್ತಿದ ಆರೋಪಿಯು ಮಹಿಳೆ ಒಬ್ಬರೇ ಇರುವುದನ್ನು ಕಂಡು ಮಾನಭಂಗಕ್ಕೆ ಯತ್ನಿಸಿದ್ದು, ಈ ವೇಳೆ ಮಹಿಳೆಯು ಚೈನ್ ಎಳೆದು ರೈಲನ್ನು ನಿಲ್ಲಿಸಿದ್ದಾರೆ. ತಕ್ಷಣವೇ ಹಾರಿ ಪರಾರಿಯಾದ ಆರೋಪಿಯನ್ನು ಕೋಡಿಂಬಾಳದಲ್ಲಿ ಸಾರ್ವಜನಿಕರು ಹಿಡಿದು ಕಡಬ ಪೊಲೀಸರಿಗೆ ಒಪ್ಪಿಸಿದ್ದಾರೆ. ಕಡಬ ಪೊಲೀಸರು ಆರೋಪಿಯನ್ನು ರೈಲ್ವೇ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

Also Read  ವಿಟ್ಲ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಕಡಬದಲ್ಲಿ ಪತ್ತೆ

ಈ ನಡುವೆ ಮಾನಭಂಗಕ್ಕೆ ಯತ್ನಿಸಿದ ವೇಳೆ ಇಬ್ಬರಿದ್ದು, ಓರ್ವ ಬಜಕೆರೆ ರೈಲ್ವೇ ನಿಲ್ದಾಣದಲ್ಲಿ ಇಳಿದು ನೆಟ್ಟಣ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾನೆ ಎಂಬ ವಿಚಾರ ಸಾರ್ವಜನಿಕವಾಗಿ ಹರಡಿದ್ದರಿಂದ ಮೂಜೂರು ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ನೇಪಾಳ ನಿವಾಸಿ ಬಬ್ಲು ಎಂಬಾತನನ್ನು ತಡೆಹಿಡಿದ ಸಾರ್ವಜನಿಕರು ಆತನನ್ನು ಕಡಬ ಪೊಲೀಸರ ವಶಕ್ಕೊಪ್ಪಿಸಿದ್ದಾರೆ. ಆತನನ್ನು ವಿಚಾರಿಸಲಾಗಿ ಮಂಗಳೂರಿನಲ್ಲಿ ಕೂಲಿ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದ್ದು, ಘಟನೆಗೂ ಈತನಿಗೂ ಸಂಬಂಧವಿಲ್ಲ ಎಂದು ಪೊಲೀಸರ ಪ್ರಾಥಮಿಕ ವಿಚಾರಣೆಯ ವೇಳೆ ತಿಳಿದುಬಂದಿದೆ. ಆದರೆ ಹೆಚ್ಚಿನ ವಿಚಾರಣೆಗಾಗಿ ಇಬ್ಬರನ್ನೂ ಕಡಬ ಪೊಲೀಸರು ಪುತ್ತೂರು ರೈಲ್ವೇ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

Also Read  ಸರ್ವಜ್ಞ ವಚನಗಳಿಂದ ಸಮಾಜದಲ್ಲಿ ನೈತಿಕತೆ ನಿರ್ಮಾಣ

error: Content is protected !!
Scroll to Top