ಪ್ರತಿಭಾ ಕಾರಂಜಿ ➤ ಜ್ಞಾನೋದಯ ಬೆಥನಿ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.24. ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಪುತ್ತೂರು ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜ್ಞಾನೋದಯ ಬೆಥನಿ ಪಿ ಯು ಕಾಲೇಜಿನ 10ನೇ ತರಗತಿ ವಿದ್ಯಾರ್ಥಿನಿ ಕು. ರಕ್ಷಾರವರು ಜಾನಪದ ಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕೆ ಆಯ್ಕೆಯಾಗಿದ್ದಾರೆ.

ಇವರು ರಮೇಶ್ ಶೆಟ್ಟಿ ಹಾಗೂ ಸುನೀತಾ ದಂಪತಿಗಳ ಪುತ್ರಿ. ಇವರಿಗೆ ಸಂಸ್ಥೆಯ ಪ್ರಾಂಶುಪಾಲರಾದ ರೆ|ಫಾ| ಮ್ಯಾಥ್ಯು ಪ್ರಫುಲ್ ರವರು ಅಭಿನಂದಿಸಿದರು.

Also Read  ಮಂಗಳೂರನ್ನು ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡಲು ಗೃಹಸಚಿವ ಪರಮೇಶ್ವರ್ ಸೂಚನೆ

error: Content is protected !!
Scroll to Top