(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.26. ಪ್ರವಾಹದಿಂದ ಹಾನಿಯಾಗಿರುವ ಕಿಂಡಿ ಅಣೆಕಟ್ಟುಗಳ ಮರು ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ 30 ಕೋ.ರೂ.ಗಳನ್ನು ಬಿಡುಗಡೆಗೊಳಿಸಲಾಗುವುದು ಎಂದು ಹಾಗೂ ಸಣ್ಣ ನೀರಾವರಿ ಇಲಾಖಾ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ಶನಿವಾರದಂದು ಬೆಳ್ತಂಗಡಿ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಪ್ರವಾಹದಿಂದ ಹಾನಿಯಾಗಿರುವ ಪ್ರದೇಶದಲ್ಲಿ ನದಿಗಳಿಗೆ ತಡೆಗೋಡೆ ನಿರ್ಮಾಣಕ್ಕೆ ಬೇಡಿಕೆ ಬರುತ್ತಿದ್ದು, ಈ ಬಗ್ಗೆ ತಜ್ಞರು ಅಧ್ಯಯನ ನಡೆಸಿ ಅವರ ವರದಿಯ ಆಧಾರದಲ್ಲಿ ತಡೆಗೋಡೆಗೆ ಅನುದಾನ ನೀಡುವ ಕಾರ್ಯ ಮಾಡಲಾಗುವುದು ಎಂದರು. ಶುಕ್ರವಾರದಂದು ಧರ್ಮಸ್ಥಳಕ್ಕೆ ಆಗಮಿಸಿದ್ದ ಸಚಿವರು ಶನಿವಾರ ಬೆಳಗ್ಗೆ ದೇವರ ದರ್ಶನ ಪಡೆದ ಬಳಿಕ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.