(ನ್ಯೂಸ್ ಕಡಬ) newskadaba.com ನವದೆಹಲಿ, ಅ.29 ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸುಪ್ರಿಂಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಶರಾದ್ ಅರವಿಂದ್ ಬೊಬ್ಡೆ ಅವರನ್ನು ಮಂಗಳವಾರದಂದು ಅಧಿಕೃತವಾಗಿ ನೇಮಕ ಮಾಡಿದ್ದಾರೆ.
ಈಗಿನ ಮುಖ್ಯ ನ್ಯಾಯಮೂರ್ತಿಯಾಗಿರುವ ರಂಜನ್ ಗೊಗೊಯ್ ಅವರು ನವೆಂಬರ್ 17ರಂದು ನಿವೃತ್ತಿಯಾಗಲಿದ್ದು, ನ.18ಕ್ಕೆ ಮುಂದಿನ ಸಿಜೆಐ ಆಗಿ ಎಸ್.ಎ.ಬೊಬ್ಡೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನ್ಯಾಯಮೂರ್ತಿ ಬೊಬ್ಡೆ ಅವರು 47ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಲಿದ್ದು, ಏಪ್ರಿಲ್ 23, 2021ಕ್ಕೆ ನಿವೃತ್ತಿ ಹೊಂದಲಿರುವ ಇವರು ಒಟ್ಟು 18 ತಿಂಗಳಗಳವರೆಗೂ ಸಿಜೆಐ ಆಗಿ ಕಾರ್ಯನಿರ್ವಹಿಸಲಿದ್ದಾರೆ.