(ನ್ಯೂಸ್ ಕಡಬ) newskadaba.com ಕೊಣಾಜೆ, ಅ.29. ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಠಾಣಾ ವ್ಯಾಪ್ತಿಯ ಕೊಣಾಜೆಯಲ್ಲಿ ನಡೆದಿದೆ.
ಮೃತ ಯುವಕನನ್ನು ಪಜೀರು ಗ್ರಾಮದ ಬಾಕಿಮಾರು ನಿವಾಸಿ ನಾರಾಯಣ ಪೂಜಾರಿ ಎಂಬವರ ಪುತ್ರ ಸಂತೋಷ್ (26) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಇಲೆಕ್ಟ್ರಿಕಲ್ ಕೆಲಸದಲ್ಲಿದ್ದ ಈತ ಸೋಮವಾರ ರಾತ್ರಿ ಮನೆಗೆ ಹೋಗುತ್ತಿದ್ದಾಗ ಬಸ್ ಢಿಕ್ಕಿ ಎನ್ನಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.