ಭ್ರಷ್ಟರ ಹುಟ್ಟಡಗಿಸಿದ್ದ ಲೋಕಾಯುಕ್ತ ಮಾಜಿ ನ್ಯಾಯಮೂರ್ತಿ ➤ ಎಂ ವೆಂಕಟಾಚಲ ಇನ್ನಿಲ್ಲ



(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.30. ಭ್ರಷ್ಟ ರಾಜಕಾರಣಿಗಳ ಮತ್ತು ಅಧಿಕಾರಿಗಳ ಹುಟ್ಟಡಗಿಸಿದ್ದ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಎನ್. ವೆಂಕಟಾಚಲ ಬುಧವಾರದಂದು ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ.





ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಪಣ ತೊಟ್ಟಿದ್ದ ಎನ್. ವೆಂಕಟಾಚಲ ತಾಲೂಕು ಮಟ್ಟದಿಂದ ರಾಜ್ಯ ಮಟ್ಟದವರೆಗೆ ಅಲ್ಲಲ್ಲಿ ಸಭೆ ನಡೆಸಿ ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡುವ ಮೂಲಕ ಲೋಕಾಯುಕ್ತ ಸಂಸ್ಥೆಗೆ ಮೆರುಗನ್ನು ನೀಡಿದ್ದರು‌. ಅಲ್ಲದೆ ಭ್ರಷ್ಟರ ಪಾಲಿಗೆ ಸಿಂಹಸ್ವಪ್ನವಾಗಿದ್ದ ಅವರು ಅಲ್ಪ ಕಾಲದ ಅನಾರೋಗ್ಯದಿಂದ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ವಿಧಿವಶರಾದರು.






error: Content is protected !!
Scroll to Top