ಕಾರು – ಬೈಕ್ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು



(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.02. ಬೈಕ್ ಹಾಗೂ ಕಾರು ನಡುವೆ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಶನಿವಾರದಂದು ನಡೆದಿದೆ.







ಮೃತ ಸವಾರನನ್ನು ಕಲ್ಲೇರಿ ನಿವಾಸಿ ಅಬ್ದುಲ್ ಅಝೀಜ್ (37) ಎಂದು ಗುರುತಿಸಲಾಗಿದೆ. ಅಝೀಝ್ ರವರು ತನ್ನ ಬೈಕ್ ನಲ್ಲಿ ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಆಗಮಿಸುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕಾರು ನಡುವೆ ಮಠ ಮಸೀದಿಯ ಬಳಿ ಢಿಕ್ಕಿ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅಬ್ದುಲ್ ಅಝೀಝ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top