(ನ್ಯೂಸ್ ಕಡಬ) newskadaba.com, ಮಂಗಳೂರು. ನ.05. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಇಂದಿನಿಂದ ನವೆಂಬರ್ 7ರ ತನಕ ಮೂರು ದಿನಗಳ ಗಡಿನಾಡು ಸಂಸ್ಕ್ರತಿ ಉತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಮಂಗಳೂರು ಪುರಭವನದಲ್ಲಿ ನಡೆಯಲಿದೆ.
ಗಡಿನಾಡು ಸಂಸ್ಕ್ರತಿ ಉತ್ಸವದ ಉದ್ಘಾಟನೆ ಯನ್ನು ಇಂದು ಸಂಜೆ 6.15 ಕ್ಕೆ ದಕ್ಷಿಣ ಕನ್ನಡ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಆರ್.ಸೆಲ್ವಮಣಿ ಉದ್ಘಾಟಿಸಲಿದ್ದಾರೆ. ಗಡಿನಾಡು ಸಂಸ್ಕ್ರತಿ ಉತ್ಸವದ ಅಂಗವಾಗಿ ಮೂರು ದಿನಗಳ ಕಾಲ ಪ್ರತಿದಿನ ಸಂಜೆ ಯಕ್ಷಗಾನ ಸೇರಿದಂತೆ ವೈವಿಧ್ಯಮಯ ಸಂಗೀತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.