ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ ➤ ನ.10 ರಂದು ಪೂರ್ವ ವಿದ್ಯಾರ್ಥಿಗಳ ಸಭೆ

(ನ್ಯೂಸ್ ಕಡಬ) newskadaba.com  ಕಡಬ, ನ.06. ಇಲ್ಲಿನ ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ಪೂರ್ವ ವಿದ್ಯಾರ್ಥಿಗಳ ಸಭೆಯು ನವೆಂಬರ್ 10 ರಂದು ಅಪರಾಹ್ನ 2:30 ಕ್ಕೆ ಸೈಂಟ್ ಜೋಕಿಮ್ಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.


ವಿದ್ಯಾ ಸಂಸ್ಥೆಯ ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿ 2020 ರ ಜನವರಿ 14 ರಂದು ತುಳು ನಾಟಕವೊಂದನ್ನು ಆಯೋಜಿಸುವ ಕುರಿತು ಈಗಾಗಲೇ ಯೋಜನೆಯನ್ನು ರೂಪಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಸಂಸ್ಥೆಯ ಪೂರ್ವ ವಿದ್ಯಾರ್ಥಿಗಳ ಬೆಂಬಲವನ್ನು ಮನಗಂಡು ಸಭೆ ಕರೆಯಲಾಗಿದೆ. ಎಲ್ಲಾ ಪೂರ್ವ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಬೇಕೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Also Read  ರ‍್ಯಾಪರ್ ಚಂದನ್ ಶೆಟ್ಟಿಗೆ ಸಂಕಷ್ಟ ತಂದ 'ಕೋಲು ಮಂಡೆ ಜಂಗಮ ದೇವರು" ಹಾಡು


error: Content is protected !!
Scroll to Top