ಕಡಬ: ಬೈಕ್ – ಜೀಪ್ ಢಿಕ್ಕಿ ➤ ಸವಾರನಿಗೆ ಗಾಯ



(ನ್ಯೂಸ್ ಕಡಬ) newskadaba.com ಕಡಬ, ನ.24. ಬೈಕ್ ಹಾಗೂ ಜೀಪು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಗಾಯಗೊಂಡ ಘಟನೆ ಕಡಬ ಸಮುದಾಯ ಆರೋಗ್ಯ ಕೇಂದ್ರದ ಬಳಿ ನಡೆದಿದೆ.







 

 

ಗಾಯಾಳು ಬೈಕ್ ಸವಾರನನ್ನು ಕಡಬ ತಾಲೂಕು 102 ನೇ ನೆಕ್ಕಿಲಾಡಿ ಗ್ರಾಮದ ನಡುಮಜಲು ನಿವಾಸಿ ಶಂಸುದ್ದೀನ್ ಮುಸ್ಲಿಯಾರ್ ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕಿನಲ್ಲಿ ತೆರಳುತ್ತಿದ್ದಾಗ ಪಂಜ ರಸ್ತೆಯ ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಜೀಪ್ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾಲು ಮುರಿತಕ್ಕೊಳಗಾದ ಇವರನ್ನು ಕಡಬದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.






error: Content is protected !!
Scroll to Top