(ನ್ಯೂಸ್ ಕಡಬ) newskadaba.com ಕಡಬ, ನ.24. ಕಡಬ ಠಾಣಾ ವ್ಯಾಪ್ತಿಯ ಪುಳಿಕುಕ್ಕು ಸೇತುವೆ ಬಳಿಯ ತಿರುವು ರಸ್ತೆಯಲ್ಲಿ ದ್ವಿಚಕ್ರ ವಾಹನ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಎಡಮಂಗಲ ಗ್ರಾಮದ ಗಿರಿಯಮಜಲು ನಿವಾಸಿ
ಚೇತನ್ ಕುಮಾರ್ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಡಬದಿಂದ ಮನೆಯತ್ತ ತನ್ನ ಬೈಕಿನಲ್ಲಿ ತೆರಳುತ್ತಿದ್ದ ಚೇತನ್ ಅವರ ಬೈಕ್ ಗೆ ಮೈಸೂರು ಮೂಲದವರು ಪ್ರಯಾಣಿಸುತ್ತಿದ್ದ ಝೈಲೊ ಕಾರು ಢಿಕ್ಕಿ ಹೊಡೆದಿದೆ. ಅಪಘಾತದಿಂದ ಚೇತನ್ ರಸ್ತೆಗೆಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.