ಲೇಡಿಗೋಷನ್ ನಲ್ಲಿದ್ದ ‘ಗೆಳತಿ’ ವಿಶೇಷ ಚಿಕಿತ್ಸಾ ಘಟಕ ಬಂದ್ ➤ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಇನ್ಮುಂದೆ “ಸಖಿ”ಯೇ ಆಸರೆ..!!

 (ನ್ಯೂಸ್ ಕಡಬ) newskadaba.com ಮಂಗಳೂರು, .26.  ಜಿಲ್ಲಾ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ  ಕಾರ್ಯನಿರ್ವಹಿಸುತ್ತಿದ್ದ ಗೆಳತಿ ಜಿಲ್ಲಾ ವಿಶೇಷ ಚಿಕಿತ್ಸಾ ಘಟಕವು ನವೆಂಬರ್ 21 ರಿಂದ ಸ್ಥಗಿತಗೊಂಡಿರುತ್ತದೆ.

ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಸೇವೆ, ಪೊಲೀಸ್ ಸೇವೆ, ಕಾನೂನು ಸೇವೆ, ಸಮಾಲೋಚನೆ ಮತ್ತು ತಾತ್ಕಾಲಿಕ ವಸತಿ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಯೋಜನೆಯಾದ “ಸಖಿ” (ಒನ್ ಸ್ಟಾಪ್ ಸೆಂಟರ್) ಕೇಂದ್ರವು ಜಿಲ್ಲಾ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯ 2ನೇ ಮಹಡಿಯಲ್ಲಿ ದಿನದ 24×7 ಅವಧಿ ಕಾರ್ಯನಿರ್ವಹಿಸುತ್ತಿದೆ. ದೌರ್ಜನ್ಯಕ್ಕೊಳಗಾದ ಮಹಿಳೆಯರು “ಸಖಿ” (ಒನ್ ಸ್ಟಾಪ್ ಸೆಂಟರ್) ಕೇಂದ್ರದ ನೆರವನ್ನು ಪಡೆದುಕೊಳ್ಳಬಹುದು ಎಂದು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group