ಸ್ವಯಂ ಉದ್ಯೋಗ- ಸಹಾಯಧನ

(ನ್ಯೂಸ್ ಕಡಬ) newskadaba.com, ಮಂಗಳೂರು, ನ.29.   ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವ ರೂ.1.20 ಲಕ್ಷ ವಾರ್ಷಿಕ ಆದಾಯ ಮಿತಿ ಹೊಂದಿರುವ 18 ರಿಂದ 45 ವರ್ಷ ಪ್ರಾಯದ ಅಭ್ಯರ್ಥಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಬ್ಯಾಂಕ್ ಮುಖಾಂತರ ಸಾಲ ಮತ್ತು ಬಡ್ಡಿ ಸಹಾಯಧನ ನೆರವು ನೀಡಲಾಗುವುದು.


ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 10 ರೊಳಗಾಗಿ ಕಚೇರಿ ಸಮಯದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನಗರ ಬಡತನ ನಿರ್ಮೂಲನಾ ಕೋಶವನ್ನು ಸಂಪರ್ಕಿಸಿ ಪ್ರಯೋಜನ ಪಡೆಯಬಹುದು ಎಂದು ಉಪ ಆಯುಕ್ತರು, ಮಹಾನಗರಪಾಲಿಕೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಮರ್ದಾಳ: ವಿಶೇಷ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

error: Content is protected !!
Scroll to Top