ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com, ಪುತ್ತೂರು , ಡಿ.3  ಹಣಕಾಸಿನ ಸಮಸ್ಯೆಯಿಂದ ಮನನೊಂದುಕೊಂಡು ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ  ಸೋಮವಾರದಂದು ನಡೆದಿದೆ.


ಮೃತ ವ್ಯಕ್ತಿಯನ್ನು ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಪಿ. ನಾರಾಯಣ ರಾವ್ (35 ವರ್ಷ)ಎಂದು ಗುರುತಿಸಲಾಗಿದೆ. ಅವರನ್ನು ಮಧ್ಯಾಹ್ನ ಊಟಕ್ಕೆಂದು ಕರೆದಾಗ ಯಾವುದೇ ಪ್ರತಿಕ್ರಿಯೆ ನೀಡದೇ ಇದ್ದುದರಿಂದ, ತಾಯಿ ಕೋಣೆಯ ಬಾಗಿಲನ್ನು ತೆರೆದಾಗ ಅಡ್ಡವೊಂದಕ್ಕೆ ಸೀರೆಯಿಂದ ಕುತ್ತಿಗೆಗೆ ನೇಣು ಬಿಗಿದು ನೇತಾಡುತ್ತಿದ್ದುದು ಕಂಡುಬಂದಿದೆ. ಜೀವನ್ಮರಣ ಸ್ಥಿತಿಯಲ್ಲಿದ್ದವರನ್ನು, ನೆರೆಯವರ ಸಹಾಯದಿಂದ ಕೆಳಗಿಸಿ ಚಿಕಿತ್ಸೆಗಾಗಿ ಪುತ್ತೂರು ಸಿಟಿ ಆಸ್ಪತ್ರೆಗೆ ಕರೆತಂದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದರ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕಡಬ: 39ನೇ ಸಂಯುಕ್ತ ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ

error: Content is protected !!
Scroll to Top