ಮಂಗಳೂರು: ಕೋಸ್ಟ್‌ಗಾರ್ಡ್ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು, ಡಿ.6: ಇಂಡಿಯನ್ ಕೋಸ್ಟ್‌ಗಾರ್ಡ್ ಅಧಿಕಾರಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಜಬೈಲನಲ್ಲಿ ನಡೆದಿದೆ.

ಆತ್ಯಹತ್ಯೆಗೈದವರನ್ನು ಕುಂಜತ್‌ಬೈಲ್ ಕ್ವಾಟ್ರರ್ಸ್ ನಿವಾಸಿ ಪವಕುಮಾರ್ (40) ಎಂದು ಗುರುತಿಸಲಾಗಿದೆ. ಅವರು ಮೂಲತಃ ಹರಿಯಾಣದ ನಿವಾಸಿ ಎಂದು ತಿಳಿದು ಬಂದಿದೆ.
ಕೌಟುಂಬಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದು, ಈ ಹಿನ್ನೆಲೆಯಲ್ಲಿ ಕೆಲವು ದಿನಗಳಲ್ಲಿ ಕೆಲಸಕ್ಕೆ ರಜೆ ಹಾಕಿದ್ದರು ಎಂದು ತಿಳಿದು ಬಂದಿದೆ. ತನ್ನ ಕ್ವಾಟ್ರರ್ಸ್‌ನ ರೂಮಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರಿಗೆ ಪತ್ನಿ, ಇಬ್ಬರು ಮಕ್ಕಳು ಅಗಲಿದ್ದಾರೆ. ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top