ಉಪ್ಪಿನಂಗಡಿ, ಡಿ.6: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯ ತೆಕ್ಕಾರು ಗ್ರಾಮದ ಮರಮ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಮರಮ ಮನೆ ನಿವಾಸಿ ಪ್ರಥಮ್ ಕೊಂಡೆ (19) ಎಂದು ಗುರುತಿಸಲಾಗಿದೆ.
ಈತ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿಯಾಗಿದ್ದು, ಇಂದು ಬೆಳಗ್ಗೆ ಮನೆಯ ಹತ್ತಿರವಿರುವ ಮಾವಿನಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.