ಬೈಕ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ



(ನ್ಯೂಸ್ ಕಡಬ) newskadaba.com, ಬಂಟ್ವಾಳ, ಡಿ.7  ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕು ತೆಂಕಬೆಳ್ಳೂರು ಗ್ರಾಮದ ಕರ್ಗಲ್ಲು ಎಂಬಲ್ಲಿ ನಿನ್ನೆ ನಡೆದಿದೆ.







ಬೈಕ್ ಸವಾರ ದಾಮೋದರ ಎಂಬವರ ತಲೆ ಹಾಗೂ ಕೈ ಕಾಲುಗಳಿಗೆ ಗಾಯವಾಗಿರುತ್ತದೆ. ಗಾಯಾಳು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಲಾಗಿದೆ ಎಂದು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top